ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರಕ್ಕಾಗಿ ಅನೈತಿಕ ಮೈತ್ರಿಗೆ ಮುಂದಾಗಿದೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಚುನಾವಣೆಗೆ ಮೊದಲು ಬಹುಮತ ಬಾರದಿದ್ದರೆ ನಾವು ವಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ. ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ಈಗ್ಯಾಕೆ ಕಾಂಗ್ರೆಸ್ ಜತೆ ಮೈತ್ರಿಗೆ ಮುಂದಾಗಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.ಇದೇ ವೇಳೆ ವಿಶ್ವಾಸಮತ ಯಾಚನೆ ಸಂದರ್ಭ ಯಡಿಯೂರಪ್ಪ ಸರ್ಕಾರಕ್ಕೆ ಸೋಲಾಗಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಮುಕ್ತರಾಗಿದ್ದೇವೆ.