ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗಿ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 108 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.ನಿನ್ನೆ 10,566 ಟೆಸ್ಟಿಂಗ್ ನಡೆಸಲಾಗಿದ್ದು, 1,780 ಸಕ್ರೀಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ. ಈ ಬೆನ್ನಲ್ಲೇ ಕೊವಿಡ್ ನಿಯಂತ್ರಣಕ್ಕೆ ತರಲು ಬಿಬಿಎಂಪಿ ಆರೋಗ್ಯ ಸಿಬ್ಬಂದಿ ನೇಮಿಸಿಕೊಳ್ಳಲು ಮುಂದಾಗಿದೆ.ನಗರದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು ಪಾಲಿಕೆಯಿಂದ 500 ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದೆ.ಕಳೆದ ಬಾರಿ ಗುತ್ತಿಗೆ ಆಧಾರದ ಮೇಲೆ ನೇಮಕ