ಬೆಂಗಳೂರು,ಅ.2 : ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯ ಆಯುಕ್ತ ಗೌರವ್ಗುಪ್ತ ಹೇಳಿದರು.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ಸ್ಟೋರೇಜ್ ಬಗ್ಗೆ ವೈದ್ಯರು ಚರ್ಚೆ ನಡೆಸಿದ್ದಾರೆ. ಮಕ್ಕಳ ಅಂಕಿ ಅಂಶದ ಬಗ್ಗೆ ಸರ್ವೆ ನಡೆಸಲಾಗುತ್ತಿದೆ. ಮೊದಲ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ. ಬೇಡಿಕೆ ಆಧಾರದ ಮೇಲೆ ಲಸಿಕೆ ಕೊಡಲಾಗುತ್ತದೆ ಎಂದು ಹೇಳಿದರು. ಮಕ್ಕಳಿಗೆ ವ್ಯಾಕ್ಸಿನ್ ಕೊಡುವ ಬಗ್ಗೆ ಇನ್ನೂ ಸ್ಪಷ್ಟ ಆದೇಶ ಬಂದಿಲ್ಲ.