ಬೆಂಗಳೂರು : ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ದಿ ಇಂಡಿಯಾ ಟುಡೇ ಗ್ರೂಪ್ ನಿಂದ ನೀಡಲಾಗುತ್ತಿರುವ ‘ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ವಿಭಾಗದ ಇಂಡಿಯಾ ಟುಡೇ ಹೆಲ್ತ್ ಗಿರಿ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ. ಈ ಪ್ರಯುಕ್ತ ಇಂದು ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ.