ಗಾಂಧಿನಗರ (ಗುಜರಾತ್): ಗುಜರಾತ್ನ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೋಮವಾರ ಮಧ್ಯಾಹ್ನ 2.20ಕ್ಕೆ ರಾಜ್ಯದ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ 59ರ ಹರೆಯದ ಭೂಪೇಂದ್ರ ಪಟೇಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಭೂಪೇಂದ್ರ ಪಟೇಲ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ಅವರು