ಲೋಕಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಗೆ ಬಿಗ್ ಶಾಕ್!

ನವದೆಹಲಿ| Krishnaveni K| Last Modified ಗುರುವಾರ, 4 ಅಕ್ಟೋಬರ್ 2018 (09:06 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಕೈಜೋಡಿಸಿ ಮೋದಿ ನೇತೃತ್ವದ ಬಿಜೆಪಿಗೆ ಚಳ್ಳೆ ಹಣ್ಣು ತಿನಿಸುವ ಮಾತನಾಡಿದ್ದ ಬಿಎಸ್ ಪಿ ಮಾಯಾವತಿ ಇದೀಗ ಕಾಂಗ್ರೆಸ್ ಗೆ ಕೈ ಕೊಟ್ಟಿದ್ದಾರೆ.


ವಿಪಕ್ಷಗಳು ಒಂದಾಗಿ ಮಹಾಘಟಬಂಧನ್ ಮಾಡಿಕೊಂಡು ಬಿಜೆಪಿಗೆ ಸೋಲಿನ ರುಚಿ ತೋರಿಸುವ ಉತ್ಸಾಹದಲ್ಲಿ ಕಾಂಗ್ರೆಸ್ ಇತ್ತು. ಇದಕ್ಕಾಗಿ ರಾಹುಲ್ ಗಾಂಧಿ ತಮ್ಮ ಪ್ರಧಾನಿ ಕನಸನ್ನೂ ತ್ಯಾಗ ಮಾಡಲು ಸಿದ್ಧರಿದ್ದರು.


ಆದರೆ ಇದೀಗ ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನಲೆಯಲ್ಲಿ ಕಾಂಗ್ರೆಸ್ ನಿಂದ ಪ್ರತ್ಯೇಕವಾಗಿ ಏಕಾಂಗಿಯಾಗಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಘಡದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ.


ಈ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಆಡಳಿತಾರೂಢ ಪಕ್ಷವನ್ನು ಸೋಲಿಸಲು ವಿಪಕ್ಷಗಳು ಒಂದಾಗಬೇಕಾದ ಅನಿವಾರ್ಯತೆಯಿತ್ತು. ಆದರೆ ಕಾಂಗ್ರೆಸ್ ಹೊರತಾಗಿ ಇತರ ಸ್ಥಳೀಯ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಮಾಯಾವತಿ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಮಹಾಘಟಬಂಧನದ ಭಾಗವಾಗುವ ಸಾಧ್ಯತೆ ಕಡಿಮೆ ಎಂದು ಮಾಯಾವತಿ ಪರೋಕ್ಷವಾಗಿ ಸಂದೇಶ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :