ಬೆಂಗಳೂರು : ಕೆಂಪೇಗೌಡ ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತನಿಂದ ಕರೆ ಬಂದಿದೆ. ಪರಿಣಾಮ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬೆಳಗಿನ ಜಾವ 3.30 ಸಮಯದಲ್ಲಿ ಅಪರಿಚಿತನೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ಕೆಂಪೇಗೌಡ ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ.ಈ ಹಿನ್ನೆಲೆ ಏರ್ಲೈನ್ಸ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ. ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಅವರು, ಬಾಂಬ್ ನಿಷ್ಟ್ರಿಯ ದಳ, ಶ್ವಾನ