ಬೆಂಗಳೂರು : ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯಾಂಗ ಮಕ್ಕಳಿಗೆ 5 ಲಕ್ಷ ರೂ.ಗಳ ವಿಶೇಷ ಆರೋಗ್ಯ ವಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.2022ರ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯವತಿಯಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ನನ್ನೆಲ್ಲ ದೇವರ ಮಕ್ಕಳಿಗೆ ನಮಸ್ಕಾರ. ಸರ್ಕಾರ ನೀಡುವ ಮನೆಗಳಲ್ಲಿ ದಿವ್ಯಾಂಗರಿಗೆ 3% ಮೀಸಲಿಡುತ್ತೇವೆ.ವಿಕಲಚೇತನ ಮಕ್ಕಳಿಗೆ ನೀಡುವ ಟ್ರೈಸೈಕಲ್ಗೆ