ಬೆಂಗಳೂರು(ಆ.10): ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಅನಗತ್ಯ ಖರ್ಚು ಹೆಚ್ಚಾಗಿ ನಡೆಯುತ್ತದೆ. ಅದೆಷ್ಟೇ ಸರಳ ಕಾರ್ಯಕ್ರಮವಾದರೂ ಹೂವು, ಹಣ್ಣು ಹಂಪಲು, ತುರಾಯಿ ಎಂದು ಹಣ ವ್ಯಯಿಸಲಾಗುತ್ತದೆ. ಆದರೀಗ ಈ ವಿಧಿ ವಿಧಾನಗಳಿಗೆ ಬ್ರೇಕ್ ಹಾಕಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಎಲ್ಲಾ ಖರ್ಚುಗಳಿಗೆ ತಡೆ ಹಾಕಿದ್ದಾರೆ. ಹೌದು ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಪ್ರಕಟನೆಯೊಂದನ್ನು ಹೊರಡಿಸಲಾಗಿದ್ದು, ಇದರಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ,