ಬೆಂಗಳೂರು : ಹೊಸ ವರ್ಷಕ್ಕೆ ತಯಾರಾಗಿದ್ದ ಬಾರ್ ರೆಸ್ಟೋರೆಂಟ್ ಹೋಟೆಲ್ ಗಳಿಗೆ ಫುಲ್ ಶಾಕ್ ಆಗಿದೆ. ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಅಂದುಕೊಂಡವರಿಗೆ ಶಾಕ್ ಕೊಟ್ಟಿದೆ.ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿ.28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.ಎಲ್ಲಾ ಹೋಟೆಲ್ಗಳಲ್ಲಿ ಶೆ.50 ಜನರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.