ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ನಡೆಯುವ ಚುನಾವಣೆಗೆ ಬಿಜೆಪಿ -ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಉಭಯ ಪಕ್ಷಗಳಲ್ಲಿ ಯಾರಿಗೆ ಮೇಲುಗೈ-ಯಾರಿಗೆ ಹಿನ್ನಡೆ ಅನ್ನುವ ಚರ್ಚೆ ಆರಂಭವಾಗಿದೆ.ಗೆಲ್ಲಲು ಅವಕಾಶ ಇರುವ ನಾಲ್ಕು ಸ್ಥಾನಗಳಿಗೆ ಬಿಜೆಪಿ ಇಂದು ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೆ ಕಾಂಗ್ರೆಸ್ ನಿನ್ನೆ ಸಂಜೆ ಪಟ್ಟಿ ಬಿಡುಗಡೆ ಮಾಡಿತ್ತು.ಬಿಜೆಪಿಯ ಅಭ್ಯರ್ಥಿಯಾಗಲಿದ್ದಾರೆಂದೇ ನಿರೀಕ್ಷೆ ಇದ್ದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ನಿರಾಕರಿಸಿ ವರಿಷ್ಠರು ಅಚ್ಚರಿ ಮೂಡಿಸಿದ್ದಾರೆ.