ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.ವಿಜಯಪುರದ ಕೆಲವೆಡೆ ವಿವಿ ಪ್ಯಾಟ್ ಗಳು ಪತ್ತೆಯಾದ ಪ್ರಕರಣದ ಹಿನ್ನಲೆಯಲ್ಲಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಯಡಿಯೂರಪ್ಪ ಚುನಾವಣೆ ಸಂದರ್ಭದಲ್ಲೇ ಇಂತಹ ಹಲವು ಅಕ್ರಮಗಳು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಯಡಿಯೂರಪ್ಪ