ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ಸೇ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವಾಗ ಬೇರೆಯವರು ಹೇಗೆ ಸಮಾಧಾನ ಪಟ್ಟುಕೊಳ್ಳಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.ಟ್ವಿಟರ್ ನಲ್ಲಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿರುವ ಬಿಎಸ್ ವೈ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರೇ ಬಜೆಟ್ ನ್ನು