ನವದೆಹಲಿ : ಉಕ್ರೇನ್ ಗಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಕುರಿತ ಮನವಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ವಿಚಾರಣೆ ನಡೆಸುತ್ತಿದ್ದಾರೆ.ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬಂದಿದೆ.ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ವ್ಯಕ್ತವಾಗಿರುವ ಪ್ರಶ್ನೆ ಕುರಿತು ಅಚ್ಚರಿ ವ್ಯಕ್ತಪಡಿಸಿರುವ ಸಿಜೆಐ, ಯುದ್ಧವನ್ನು ನಿಲ್ಲಿಸುವಂತೆ ನಾನು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ