ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿರುವ ಮಾಜಿ ಶಾಸಕ ಎಂ.ವೈ. ಪಾಟೀಲರ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣಕುಮಾರ ಪಾಟೀಲರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಈಡಿಗ ಸಮಾಜ ಮುಂದಾಗಿದೆ. ಅಫಜಲಪುರದಲ್ಲಿ ಆರು ಬಾರಿ ಶಾಸಕರಾಗಿ ಮಾಲೀಕಯ್ಯ ಗುತ್ತೇದಾರ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಆದರೆ ಯಾವತ್ತೂ ಎಂ.ವೈ.ಪಾಟೀಲ್ ಅಥವಾ ಅವರ ಕುಟುಂಬದವರ ಬಗ್ಗೆ ಏಕ ವಚನದಲ್ಲಿ