ಕಾವೇರಿ ನದಿ ನೀರು ಹರಿಸಲು ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.ಕಾವೇರಿ ನ್ಯಾಯಧಿಕರಣ ಆದೇಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುರುವೈ ಬೆಳೆ ಬೆಳೆದಿರುವ ತಮಿಳುನಾಡು, ಅದಕ್ಕೆ ನೀರು ಒದಗಿಸಲು ಕರ್ನಾಟಕದ ಮೇಲೆ ಒತ್ತಡ ಹೇರುತ್ತಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಅವಧಿಯಲ್ಲೂ ತಮಿಳುನಾಡು ಸಾಮಾನ್ಯ ಜಲ ವರ್ಷದ ನೀರಿನ ಪಾಲು ಕೇಳುತ್ತಿದೆ ಎಂದು ಆರೋಪಿಸಿದೆ.ಕಾವೇರಿ ಜಲಾನಯನದಲ್ಲಿರುವ ನೀರು ಸದ್ಯಕ್ಕೆ