ನವದೆಹಲಿ : ಜನವರಿ 31 ರಿಂದ ಕೇಂದ್ರ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು,ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಶಿಫಾರಸನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ.ಜನವರಿ 31 ರಂದು ಸಂಸತ್ತಿನ ಎರಡು ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೊವೀಂದ್ ಭಾಷಣ ಮಾಡಲಿದ್ದಾರೆ. ಫೆಬ್ರವರಿ 2 ರಂದು ರಾಷ್ಟ್ರಪತಿಗಳ ಭಾಷಣಕ್ಕೆ ಅಭಿನಂದನೆ ಸಲ್ಲಿಸಲಿದ್ದು, ಫೆ.3 ರಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಮೊದಲ ಹಂತದಲ್ಲಿ 12