ಬೆಂಗಳೂರು : ವಿಧಾನ ಪರಿಷತ್ ಕಲಾಪದ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರ ಗೈರಿನ ಬಗ್ಗೆ ಇವತ್ತು ಕೂಡಾ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಒಂದು ಹಂತದಲ್ಲಿ ಆಕ್ರೋಶಗೊಂಡ ಸಭಾಪತಿಗಳು ಇದೇನು ಬೀಗರ ಮನೆಯಾ ಎಂದು ಸಭಾನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಶೂನ್ಯವೇಳೆ ಕೈಗೆತ್ತಿಕೊಳ್ಳುವ ಮುನ್ನ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವ ಸಚಿವರ ಹೆಸರುಗಳನ್ನು ಸಭಾಪತಿಗಳು ಓದಿ ಹೇಳಿದರು.ಆದರೆ ಸಚಿವರಾದ ಅಶ್ವತ್ಥನಾರಾಯಣ, ಸುಧಾಕರ್,