ಬೀಜಿಂಗ್ : ಮೀನುಗಾರಿಕೆಗೆ ತೆರಳಿದ್ದ ಚೀನಾದ ದೋಣಿಯೊಂದು ಹಿಂದೂ ಮಹಾಸಾಗರದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 39 ಜನರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದೋಣಿಯಲ್ಲಿ ಚೀನಾದ 17 ಪ್ರಜೆಗಳು, ಇಂಡೋನೇಷ್ಯಾದ 17 ಜನ ಹಾಗೂ ಫಿಲಿಪೈನ್ಸ್ನ ಐವರು ಇದ್ದರು ಎಂದು ಚೀನಾ ಸೆಂಟ್ರಲ್ ಟೆಲಿವಿಷನ್ ತಿಳಿಸಿದೆ.ಇದೀಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹಾಗೂ ಪ್ರಧಾನಿ ಲಿ ಕಿಯಾಂಗ್ ವಿದೇಶಗಳಲ್ಲಿರುವ ಚೀನಾದ ರಾಜತಾಂತ್ರಿಕರಿಗೆ