ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ಚಿರತೆ ಆತಂಕ ಮನೆ ಮಾಡಿದೆ. ಬೆಂಗಳೂರು ನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಚಿರತೆ ಕಂಡುಬಂದಿದ್ದು, ಕೆಲವರಿಗೆ ದಾಳಿ ನಡೆಸಿ ಬಲಿ ಪಡೆದಿದೆ.ಇದೀಗ ಚಿರತೆ ದಾಳಿಯಲ್ಲಿ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಚಿರತೆ ದಾಳಿಯಿಂದಾಗಿ ಮೈಸೂರಿನಲ್ಲಿ ನಿನ್ನೆ ಎರಡನೇ ಬಲಿಯಾಗಿತ್ತು.ಈ ಬೆನ್ನಲ್ಲೇ ಚಿರತೆ ಕುರಿತಾಗಿ ಗಂಭೀರವಾಗಿ ಪರಿಗಣಿಸಿರುವ ಸಿಎಂ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಚಿರತೆ ಹಾವಳಿಯನ್ನು ಅರಣ್ಯ