ಬೆಳಗಾವಿ : ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿ, ಪ್ರಶಸ್ತಿ ಮೊತ್ತದ ಆದೇಶವನ್ನು ಪ್ರಕಟಿಸಿದರು.ಪರಮವೀರಚಕ್ರ ಪಡೆದವರಿಗೆ 25 ಲಕ್ಷ ರೂ.ದಿಂದ 1.5 ಕೋಟಿ ರೂ.ಗಳು, ಮಹಾವೀರಚಕ್ರ ವಿಜೇತರಿಗೆ 12 ಲಕ್ಷ