ನವದೆಹಲಿ(ಜು.30): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡನೇ ದಿನ ಬಸವರಾಜ್ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಈ ವೇಳೆ ನೂತನ ಸಿಎಂಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ. ಇಷ್ಟೇ ಅಲ್ಲ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದಿಂದ ಎಲ್ಲಾ ಸಹಕಾರ ನೀಡುವುದಾಗಿ ಮೋದಿ ಭರವಸೆ ನೀಡಿದ್ದಾರೆ.• ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ • ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಶುಭಕೋರಿದ ಪ್ರಧಾನಿ