ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸಚಿವರಿಗೆ ಹಲವು ಟಾರ್ಗೆಟ್ಗಳನ್ನ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬ ಆಗಿದ್ದರೂ ಸಹ, ಲೋಕಸಭಾ ಚುನಾವಣೆ ಕಾರಣಕ್ಕೆ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು. ಜನರ ಸಮಸ್ಯೆಗಳನ್ನು ಆಲಿಸಿ ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ