ಬೇರೆ ದಾರಿಯಿಲ್ಲದೇ ಬಿಜೆಪಿ ನಮ್ಮ ಶಾಸಕರ ಬೆಂಬಲಕ್ಕೆ ಕೈ ಚಾಚುತ್ತಿದೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು| Krishnaveni K| Last Modified ಸೋಮವಾರ, 2 ಜುಲೈ 2018 (09:09 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಹತಾಶೆಗೊಂಡಿರುವ ದರ್ಬಲ ಬಿಜೆಪಿ ಪಕ್ಷ ಇದೀಗ ಬೇರೆ ದಾರಿಯಿಲ್ಲದೇ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಬೆಂಬಲಕ್ಕಾಗಿ ಹಾತೊರೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಹೇಳಿಕೆ ಉಲ್ಲೇಖಿಸಿ ಸಿಎಂ ಈ ರೀತಿ ಆರೋಪ ಮಾಡಿದ್ದಾರೆ. ಪಕ್ಷ ಬಲವರ್ಧನೆಗೆ ಬಿಜೆಪಿ ಈ ದಾರಿ ಕಂಡುಕೊಂಡಿದೆ ಎಂದು ಅವರು ಲೇವಡಿ ಮಾಡಿದ್ದಾರೆ.‘ಸ್ವತಃ ಯಡಿಯೂರಪ್ಪನವರು ಇತ್ತೀಚೆಗೆ ಪಕ್ಷ ಬಲವರ್ಧನೆಯಾಗಬೇಕು ಎಂದಿದ್ದರು. ಹಾಗಾಗಿ ಅವರು ತಮ್ಮ ಪಕ್ಷ ಬಲಪಡಿಸಲು ಕಾಂಗ್ರೆಸ್, ಜೆಡಿಎಸ್ ಶಾಸಕರ ಬೆಂಬಲ ಕೋರುತ್ತಿದ್ದಾರೆ’ ಎಂದು ಸಿಎಂ ಲೇವಡಿ ಮಾಡಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :