ಬೆಂಗಳೂರು: ನಿನ್ನೆ ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಂದಿದ್ದ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸೂಕ್ತ ಭದ್ರತೆ ಒದಗಿಸದ ಪೊಲೀಸರ ವಿರುದ್ಧ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವಾಗ ಟ್ರಾಫಿಕ್ ಜ್ಯಾಮ್ ನಲ್ಲಿ ಸಿಲುಕಿಕೊಂಡ ಸಿಎಂ ಮಮತಾ ಚಾಲುಕ್ಯ ವೃತ್ತದಿಂದ ವಿಧಾನಸೌಧದವರೆಗೆ ಭದ್ರತೆಯಿಲ್ಲದೇ ನಡೆದುಕೊಂಡೇ ಬಂದಿದ್ದರು.ಈ ಬಗ್ಗೆ ಬಳಿಕ ಮಮತಾ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಸಿಟ್ಟಿಗೆದ್ದ ಸಿಎಂ