ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದರೆ, ಸಿಎಂ ಕುಮಾರಸ್ವಾಮಿ ಲೆಕ್ಕಾಚಾರವೇ ಬೇರೆ ಇದ್ದಂತಿದೆ.ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಎಂ ಕುಮಾರಸ್ವಾಮಿ ನೋಡೋಣ ಅವರು ಜೆಡಿಎಸ್ ನ್ನು ಯಾವ ರೀತಿ ನೋಡಿಕೊಳ್ಳುತ್ತಾರೆ ಅಂತ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆ ಇದೆ. ಆದರೆ ಅದರ