ಬೆಂಗಳೂರು: ಸುಪ್ರೀಂ ಕೋರ್ಟ್ ಅಣತಿಯಂತೆ ಕಾವೇರಿ ನದಿ ನಿರ್ವಹಣಾ ಮಂಡಳಿ ಸ್ಥಾಪನೆ ಮಾಡಲು ಕೇಂದ್ರ ಹೊರಟಿರುವ ಬೆನ್ನಲ್ಲೇ ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಅದರಲ್ಲಿರುವ ಕೆಲವು ಅಂಶಗಳ ಬಗ್ಗೆ ನಮ್ಮ ವಿರೋಧವಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.ಇದೇ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕಳೆದ ವಾರ