ನವದೆಹಲಿ: ಕಾವೇರಿ ನದಿ ಪ್ರಾಧಿಕಾರ ರಚನೆ ಸಂಬಂಧ ಇಂದು ದೆಹಲಿಯಲ್ಲಿ ಸಿಎಂ ಕುಮಾರಸ್ವಾಮಿ ರಾಜ್ಯದ ಸಂಸದರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯಲಿರುವ ಸಭೆಗೆ ರಾಜ್ಯದ ಸಂಸದರು ಸೇರಿದಂತೆ ರಾಜ್ಯ ಪ್ರತಿನಿಧಿಸುವ ಎಲ್ಲಾ ನಾಯಕರು ಆಗಮಿಸಲಿದ್ದಾರೆ. ಸಂಸತ್ತು ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಹಿತ ಕಾಪಾಡುವಂತೆ ಸಂಸದರಿಗೆ ಸಿಎಂ ಮನವಿ ಮಾಡಲಿದ್ದಾರೆ.ಕಾವೇರಿ ನದಿ ಪ್ರಾಧಿಕಾರ ರಚನೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ಮರು