ನವದೆಹಲಿ : ಮೂರು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು ಸೋಮವಾರ (ಇಂದು) ರಾಹುಲ್ ಗಾಂಧಿ ಅವರ ನಿವಾಸಕ್ಕೆ ತೆರಳಿ, ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ರಾಹುಲ್ ಅವರೊಂದಿಗೆ ಸೌಹಾರ್ದಯುತ ಮಾತುಕತೆಗಾಗಿ ಭೇಟಿಯಾಗಿದ್ದೇನೆ. ಈ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಹಲವು ಕ್ರಮಗಳ ಬಗ್ಗೆ ಚರ್ಚಿಸಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ವೇಳೆ ಜೆಡಿಎಸ್ ಮುಖಂಡ ಡ್ಯಾನಿಸ್ ಅಲಿ