ದಾವಣಗೆರೆ : ಮೇ 12ರಂದು ವಿಧಾನ ಸಭಾ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಶುಕ್ರವಾರ ತನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಆದರೆ ಇದೀಗ ಸಿಎಂ ಸಿದ್ದರಾಮಯ್ಯನವರು ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಕಾಪಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಚನ್ನಗಿರಿ ವಿಧಾನಸಭಾ ಕ್ಷೇತ್ರದ ಸಂತೆಬೆನ್ನೂರಿನಲ್ಲಿ ಮಾತನಾಡಿದ ಅವರು, 2008 ರಲ್ಲಿ ಬಿಜೆಪಿ ಪ್ರಣಾಳಿಕೆಯ ಭರವಸೆಯನ್ನು ಪೂರ್ಣಗೊಳಿಸಿರಲಿಲ್ಲ. ನಾವು ಇಂದಿರಾ ಕ್ಯಾಂಟಿನ್ ಆರಂಭ ಮಾಡಿದ್ದೇವೆ. ಅವರು ಹೊಸ ಪ್ರಣಾಳಿಕೆಯಲ್ಲಿ ಅನ್ನಪೂರ್ಣ ಕ್ಯಾಂಟಿನ್ ತೆಗೆಯುತ್ತೇವೆ ಅಂದಿದ್ದಾರೆ.