ಬೆಂಗಳೂರು(ಜುಲೈ 26): ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ನಿಜವಾಗುತ್ತಿದೆ. ತಾವು ರಾಜೀನಾಮೆ ನೀಡಲು ತೀರ್ಮಾನ ಮಾಡಿರುವುದಾಗಿ ಸ್ವತಃ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ ಈ ವಿಚಾರವನ್ನು ಸ್ಪಷ್ಟಪಡಿಸಿದರು. ರಾಜೀನಾಮೆ ನೀಡುವಂತೆ ಯಡಿಯೂರಪ್ಪಗೆ ಹೈಕಮಾಂಡ್ ಸೂಚನೆ ನೀಡಿತ್ತು. ಇಂದು ಸಮಾರಂಭದ ಬಳಿಕ ರಾಜ್ಯಪಾಲರನ್ನ ಭೇಟಿಯಾಗಿ ರಾಜೀನಾಮೆ ನೀಡುತ್ತಿರುವುದಾಗಿ ಯಡಿಯೂರಪ್ಪ ಅವರು ಹೇಳಿದರು.