ಬಳ್ಳಾರಿ, ಸೆ 07 : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂಪರ್ ಕೊಡುಗೆ ನೀಡಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಅಸಮಾಧಾನ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು. ಹೊಸ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಹುದ್ದೆಗಳನ್ನು