ನವದೆಹಲಿ : ದೇಶದಲ್ಲಿ ಕೋವಿಡ್ ಕೇಸ್ಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳು ಶಾಲಾ-ಕಾಲೇಜುಗಳನ್ನು ಪುನಃ ಮುಚ್ಚುವಂತೆ ಆದೇಶಿಸಿವೆ. ತಮಿಳುನಾಡಲ್ಲಿ ಜ.31ರವರೆಗೂ 1ರಿಂದ 12ನೇ ತರಗತಿ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ನಡೆಸದಂತೆ ಆದೇಶಿಸಲಾಗಿದೆ. ಜ. 19ರಿಂದ ಆರಂಭವಾಗಬೇಕಿದ್ದ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಸಹ ಕೋವಿಡ್ ಮುಂದೂಡಿದೆ.ಇನ್ನು ಉತ್ತರಪ್ರದೇಶದಲ್ಲಿ ಜ.23 ರವರೆಗೆ ಶಾಲಾ-ಕಾಲೇಜುಗಳು ಬಂದ್ ಆಗಲಿವೆ. ಆದರೆ ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ ಎಂದು ಸರ್ಕಾರ ತಿಳಿಸಿದೆ.