ನವದೆಹಲಿ : ಬೇಸಿಗೆಯ ಪ್ರತಾಪ ಹೆಚ್ಚಾಗುತ್ತಿದ್ದಂತೆ ದೇಶಾದ್ಯಂತ ವಿದ್ಯುತ್ತಿಗೆ ಭಾರಿ ಬೇಡಿಕೆ ವ್ಯಕ್ತವಾಗತೊಡಗಿದೆ. ಬೇಡಿಕೆಯಷ್ಟು ವಿದ್ಯುತ್ ಪೂರೈಸಲು ಪರದಾಡುತ್ತಿರುವ ರಾಜ್ಯ ಸರ್ಕಾರಗಳು ತಾಸುಗಟ್ಟಲೆ ಲೋಡ್ಶೆಡ್ಡಿಂಗ್ ಘೋಷಣೆ ಮಾಡಿವೆ. ಜಮ್ಮು-ಕಾಶ್ಮೀರದಿಂದ ತಮಿಳುನಾಡಿನವರೆಗೆ ಬಹುತೇಕ ರಾಜ್ಯಗಳಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದೆ.2ರಿಂದ 8 ತಾಸಿನವರೆಗೆ ವಿದ್ಯುತ್ ಕೈಕೊಡುತ್ತಿದೆ. ಗುಜರಾತ್, ಆಂಧ್ರಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬೇಡಿಕೆಯಷ್ಟು ವಿದ್ಯುತ್ ಸಿಗದ ಕಾರಣ ಕೈಗಾರಿಕೆಗಳಿಗೂ ವಿದ್ಯುತ್ ಕಡಿತ ಮಾಡಲಾಗುತ್ತಿದೆ.ಕಲ್ಲಿದ್ದಲು ಸರಬರಾಜಿನಲ್ಲಿ ಆಗುತ್ತಿರುವ ವ್ಯತ್ಯಯದಿಂದಲೂ ವಿದ್ಯುತ್ ಉತ್ಪಾದನೆಗೆ