ಬೆಂಗಳೂರು : ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಕರ್ನಾಟಕಕ್ಕೆ ಹೊಂದಿಕೊಂಡಿರುವ ಕೇರಳ ಮತ್ತು ಮಹಾರಾಷ್ಟ್ರ ದಲ್ಲಿ ಇರುವ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ದಸರಾ ಹಬ್ಬದ