ಬೆಂಗಳೂರು : ಕೊರೊನಾ ಪ್ರಕರಣಗಳ ವಾಸ್ತವವನ್ನು ನೋಡಿಕೊಂಡು ರಾಜ್ಯದಲ್ಲಿ ಶಾಲೆಗಳನ್ನು ನಡೆಸಲು ತೀರ್ಮಾನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜತೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ಸಾಕಷ್ಟು ಸಮಸ್ಯೆ ಉಂಟಾಗಿದೆ. ಆದರೂ ಕಳೆದ 4 ತಿಂಗಳಿನಿಂದ ಸತತ ಪ್ರಯತ್ನ ನಡೆಸಿ