ತುಮಕೂರು : ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು ಎಂದು ಹೇಳುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ ನಿಧನ ಅತ್ಯಂತ ದುಖವಾಗಿದೆ. ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಅನಾರೋಗ್ಯದ ಕಾರಣ ಕಳೆದ ಕ್ಯಾಬಿನೆಟ್ ಗೆ ಅವರು ಹಾಜರಾಗಿರಲಿಲ್ಲ ಎಂದರು. ಅತ್ಯಂತ ಒಳ್ಳೆಯವರು ಮತ್ತು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ಇದ್ದದ್ದು ಇದ್ದ ಹಾಗೆ