ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಅದರ ಬದಲಿಗೆ ಸಚಿವ ಸಂಪುಟದಲ್ಲಿ ಸಿಂಹಪಾಲನ್ನೇ ಪಡೆದಿದೆ.ಒಟ್ಟು ಸಿಎಂ ಸ್ಥಾನದ ಸಹಿತ 12 ಸ್ಥಾನಗಳಷ್ಟೇ ಜೆಡಿಎಸ್ ಪಾಲಿಗಿದೆ. ಸ್ಪೀಕರ್, ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ಇತರ 22 ಸ್ಥಾನಗಳು ಕಾಂಗ್ರೆಸ್ ಪಾಲಾಗಿದೆ. ಅಲ್ಲಿಗೆ ಸಮ್ಮಿಶ್ರ ಸರ್ಕಾರದಲ್ಲಿ ಬಹುಪಾಲು ಕಾಂಗ್ರೆಸ್ ಪಡೆದಿದೆ.ಈಗಾಗಲೇ ಸ್ಪೀಕರ್ ಸ್ಥಾನ ಪಡೆದಿರುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷರಾಗಿ ಹಿರಿಯ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರನ್ನು