ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಹೋಗುತ್ತಾರಾ ಎಂಬ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಿದೆ.ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎರಡೂ ಪಕ್ಷಗಳೂ ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.ಈಗಾಗಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿಗೆ ಗ್ರೀನ್ ಸಿಗ್ನಲ್