ನವದೆಹಲಿ: ಮೊನ್ನೆಯಷ್ಟೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್ ಗಾಂಧಿಯನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ್ದ ಕಾಂಗ್ರೆಸ್ ಇದೀಗ ವರಸೆ ಬದಲಿಸಿದೆ.ರಾಹುಲ್ ಪ್ರಧಾನಿ ಅಭ್ಯರ್ಥಿಯಾದರೆ ಬಿಎಸ್ ಪಿ, ತೃಣಮೂಲ ಕಾಂಗ್ರೆಸ್ ಬೆಂಬಲ ಕಷ್ಟ ಎಂದು ಅರಿತ ಕಾಂಗ್ರೆಸ್ ಇದೀಗ ಆರ್ ಎಸ್ ಎಸ್ ಮತ್ತು ಬಿಜೆಪಿ ಸೋಲಿಸುವ ಸಾಮರ್ಥ್ಯವಿರುವ ಯಾರಿಗೇ ಆದರೂ ತನ್ನ ಬೆಂಬಲವಿದೆ ಎಂದು ಹೇಳಿಕೊಂಡಿದೆ.ಸ್ವತಃ ರಾಹುಲ್ ಗಾಂಧಿ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ಮಹಿಳಾ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ