ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಾಯಿಗೆ ಬೀಗ ಹಾಕಿಸಲು ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.ಡಿಸಿಎಂ ಡಾ ಜಿ ಪರಮೇಶ್ವರ್, ಸಚಿವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಕಾಂಗ್ರೆಸ್ ಸಚಿವರೆಲ್ಲರೂ ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗಳಿಂದಾಗಿ ಸರ್ಕಾರಕ್ಕೆ ಭಂಗವಾದೇ ಇರಲು ಈ ಸಭೆಯಲ್ಲಿ ಯೋಜನೆ ರೂಪಿಸಲಾಗುವುದು ಎನ್ನಲಾಗಿದೆ.ನಿನ್ನೆ ಧರ್ಮಸ್ಥಳದಲ್ಲಿರುವ ಸಿದ್ದರಾಮಯ್ಯ ಭೇಟಿಗೆ 18 ಜನ ಶಾಸಕರು ತೆರಳಿದ ಮೇಲೆ ಕೆಪಿಸಿಸಿ