ನವದೆಹಲಿ : ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ತೊರೆದು ಭಾನುವಾರ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ದೆಹಲಿಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ಶಾಲು ಹೊದ್ದಿಸುವುದರ ಮೂಲಕ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.