ಬೆಂಗಳೂರು: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಮಾಡಿದೆ.ಇನ್ನು ಮುಂದೆ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಅದನ್ನು ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. 2023ರ ಪರೀಕ್ಷೆಯಿಂದಲೇ ಈ ನಿಯಮ ಜಾರಿ ಬರಲಿದೆ. ಇಲ್ಲಿಯವರೆಗೆ ಮರು ಮೌಲ್ಯಮಾಪನದಲ್ಲಿ ಕನಿಷ್ಠ 6 ಅಂಕ ಬಂದರೆ ಮಾತ್ರ ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಇನ್ನು ಮುಂದೆ