ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದ ಹಿನ್ನೆಲೆ ರಾಜ್ಯಾದ್ಯಂತ ಮಳೆ ಸುರಿದಿದ್ದು, ಬಳಿಕ ವರುಣ ಸ್ವಲ್ಪ ಬಿಡುವು ನೀಡಿದ್ದ. ಇದೀಗ ಮಳೆರಾಯ ಮತ್ತೆ ರಾಜ್ಯಕ್ಕೆ ಲಗ್ಗೆಯಿಡುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಮುಂದಿನ 4 ದಿನ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಳೆ ದಕ್ಷಿಣ ಒಳನಾಡನ್ನು ಕಾಡಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇಂದು ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ