ಬೆಂಗಳೂರು : ನಗರದ ಕಾಲೇಜೊಂದರಲ್ಲಿ 12 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಗಮನಾರ್ಹ ವಿಚಾರವೆಂದರೆ 12 ವಿದ್ಯಾರ್ಥಿಗಳಲ್ಲಿ ಈಗಾಗಲೇ 11 ವಿದ್ಯಾರ್ಥಿಗಳು ಸಂಪೂರ್ಣ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 9 ಮಂದಿಗೆ ಕೊರೊನಾ ಗುಣಲಕ್ಷಣಗಳು ಕಂಡುಬಂದಿದೆ. ಆನೇಕಲ್ನ ಮರಸೂರಿನಲ್ಲಿ ಇರುವ ಸ್ಫೂರ್ತಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿಯಾಗಿದೆ. ಇನ್ನೂ ಈ ಎಲ್ಲಾ ವಿದ್ಯಾರ್ಥಿಗಳು ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿಗಳಾಗಿದ್ದಾರೆ. ಜೂನ್ನಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲಸಿಕೆ ಪಡೆದಿರಲಿಲ್ಲ ಎಂದು