ನವದೆಹಲಿ : ಭಾರತದಲ್ಲಿ ಕೊರೋನಾ ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ ಶುಕ್ರವಾರಕ್ಕೆ 5 ಲಕ್ಷ ಗಡಿ ದಾಟಿದೆ. ಈ ಮೂಲಕ ಅಮೆರಿಕ, ಬ್ರೆಜಿಲ್ ಬಳಿಕ ಕೋವಿಡ್ ಸೋಂಕಿಗೆ ಅತಿ ಹೆಚ್ಚು ಜನರು ಮೃತಪಟ್ಟಮೂರನೇ ದೇಶವಾಗಿ ಭಾರತ ಮಾರ್ಪಟ್ಟಿದೆ. ಅಮೆರಿಕದಲ್ಲಿ ಈವರೆಗೆ 9.2 ಲಕ್ಷ ಮತ್ತು ಬ್ರೆಜಿಲ್ನಲ್ಲಿ 6.3 ಲಕ್ಷ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಭಾರತದಲ್ಲಿ ಶುಕ್ರವಾರ 1072 ಸಾವು ವರದಿ ಆಗುವ ಮೂಲಕ ಒಟ್ಟು ಸಾವಿನ ಸಂಖ್ಯೆ 5,00,055ಕ್ಕೆ ಏರಿಕೆ ಆಗಿದೆ.