ಚಿಕ್ಕಮಗಳೂರು : ಒಂದೇ ದಿನ ಒಂದೇ ಸ್ಥಳಕ್ಕೆ ಐದು ಸಾವಿರಕ್ಕೂ ಅಧಿಕ ಪ್ರವಾಸಿಗರು. ಮೂರೇ ದಿನಕ್ಕೆ ಒಂದೇ ಶಾಲೆಯ 100ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ಪತ್ತೆ. ಕೊರೊನಾ ಮೂರನೇ ಅಲೆ ಆರಂಭವಾಯ್ತೋ ಅಥವಾ ಪ್ರವಾಸಿಗರಿಂದಲೇ ಕೊರೊನಾ ಹರಡುತ್ತಿದ್ಯೋ ಗೊತ್ತಿಲ್ಲ. ಆದ್ರೆ ರಾಜ್ಯದ ವಿವಿಧ ಮೂಲೆಗಳಿಂದ ಬರ್ತಿರೋ ಪ್ರವಾಸಿಗರೇ ಆ ಜಿಲ್ಲೆಗೆ ಮಗ್ಗಲ ಮುಳ್ಳಾಗಿದ್ದಾರೆ. ಹೀಗಾಗಿ ಜಿಲ್ಲೆಯ ಜನ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಆಗ್ರಹಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಾಳೆಹೊನ್ನೂರು