ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 12) ಹೊಸದಾಗಿ 227 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,91,369 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,45,164 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,140 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,036 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.