ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 12) ಹೊಸದಾಗಿ 332 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,81,732 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,34,085 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,906 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,712 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.