ಬೆಳಗಾವಿ : ಮಹಾರಾಷ್ಟ್ರದಲ್ಲಿ ಮತ್ತೆ ಡೆಡ್ಲಿ ಕೋವಿಡ್ ತಾಂಡವವಾಡುತ್ತಿದ್ದರೂ ಬೆಳಗಾವಿ ಜಿಲ್ಲಾಡಳಿತ ಡೋಂಟ್ ಕೇರ್ ಎನ್ನುತ್ತಿದೆ.ಯಾವುದೇ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳದ ಪರಿಣಾಮ ಕುಂದಾನಗರಿಯಲ್ಲಿಯೂ ಕೊರೊನಾ ಆತಂಕ ಮನೆ ಮಾಡಿದೆ.ಬೆಳಗಾವಿ ಜಿಲ್ಲೆ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಿದ್ದು, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ ಕೋವಿಡ್ 4ನೇ ಅಲೆಯ ಆತಂಕ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 2,701 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಮುಂಬೈ ಮಹಾನಗರವೊಂದರಲ್ಲೇ 1,765 ಪ್ರಕರಣಗಳು ಪತ್ತೆಯಾಗಿವೆ. ಮುಂಬೈನಲ್ಲೂ